ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತವಾಗಿದ್ದು, ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಅವರನ್ನು ನಿನ್ನೆ ದಾಖಲಿಸಲಾಗಿದ್ದು, ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದ್ದು, ಹಲವಾರು ಸಿನಿಮಾಗಳಲ್ಲಿ ತಮ್ಮ ಅದ್ಬುತ ನಟನೆಯ ಮೂಲಕ ಸಿನಿಪ್ರಿಯರ ಗಮನ ಸೆಳೆದಿದ್ದಾರೆ. ಬ್ಯಾಂಕ್ ಜನಾರ್ಧನ್ ಅವರು ಬೇಗ ಗುಣಮುಖರಾಗಿ ಬರಲೆಂದು ಅಭಿಮಾನಿಗಳು, ಕುಟುಂಬಸ್ಥರು ಹಾರೈಸಿದ್ದಾರೆ.
ಸದ್ಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು , ನಾಳೆ ಜನಾರ್ಧನ್ ಅವರಿಗೆ ಆಂಜಿಯೋಗ್ರಾಮ್ ಮಾಡುವ ಸಾಧ್ಯತೆ ಇದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ. ಬ್ಯಾಂಕ್ ಜನಾರ್ಧನ್ ಶ್ ಸಿನಿಮಾ, ಕೌರವ, ತರ್ಲೆ ನನ್ ಮಗ , , ಗಣೇಶ ಸುಬ್ರಹ್ಮಣ್ಯ, ಗೌರವ , ರಂಗ ಎಸ್ ಎಸ್ ಎಲ್ ಸಿ , ಬಂಡಾ ಅಲ್ಲ ಬಹದ್ದೂರ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.