HomeKarnatakaಗಮನಿಸಿ : ಸೆ.28 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಗಮನಿಸಿ : ಸೆ.28 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಶಿವಮೊಗ್ಗ :   ಸೆ.28 ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಶಿವಮೊಗ್ಗ ನಗರದ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿ ಸ್ಮಾರ್ಟ್ಸಿಟಿ ಕೊಳವೆ ಮಾರ್ಗ ಬದಲಾಯಿಸುವ ಕಾಮಗಾರಿ ಕೈಗೊಂಡಿದ್ದು, ಸೆ. 27 ಮತ್ತು 28 ರಂದು ನಗರದ ಬಸವೇಶ್ವರನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿ ಖಾನ್ ಬಡಾವಣೆ, ಸೋಮಿನಕೊಪ್ಪ ಹಾಗೂ ಈ ಬಡಾವಣೆಗಳಿಗೆ ಹೊಂದಿಕೊಂಡಂತಹ ಬಡಾವಣೆಗಳಲ್ಲಿ ದೈನಂದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular