
ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, , ಭಾನುವಾರ ಗಣೇಶ ವಿಸರ್ಜನೆ ವೇಳೆ ಪ್ರಸಾದ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 25 ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, 6 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

