ಬೆಂಗಳೂರು : ತಮಿಳುನಾಡಿಗೆ ಮತ್ತೆ 18 ದಿನ 3000 ಸಾವಿರ ಕ್ಯೂಸೆಕ್ ನೀರು ಬಿಡಲು ಸರ್ಕಾರಕ್ಕೆ CWRC ಆದೇಶ ಹೊರಡಿಸಿದ್ದು, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ CWRC ಆದೇಶ ವಿಚಾರ ‘ಕಾನೂನು ತಜ್ಞರ ಜೊತೆ ಚರ್ಚೆ ಬಳಿಕ ಸರ್ಕಾರದ ನಿರ್ಧಾರ ತಿಳಿಸುತ್ತೇನೆ , ಸೆ.28ರಿಂದ 18 ದಿನ ನೀರು ಹರಿಸುವಂತೆ CWRC ಆದೇಶ ನೀಡಿದೆ. ಆದ್ದರಿಂದ ನಾವು ತೀರ್ಮಾನ ತೆಗೆದುಕೊಳ್ಳಲು ಇನ್ನೂ ಸಮಯವಿದೆ ಎಂದು ಸಿಎಂ ಹೇಳಿದರು.
ಮತ್ತೆ ತಮಿಳುನಾಡಿಗೆ 3000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ‘CWRC’ ಆದೇಶ ಹೊರಡಿಸಿರುವ ಹಿನ್ನೆಲೆ ಅನ್ನದಾತರು ಮತ್ತೆ ಸಿಡಿದೆದ್ದಿದ್ದಾರೆ. ಮಂಡ್ಯದಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ಕೂಡಲೇ ನೀರು ಬಿಡುವುದನ್ನು ನಿಲ್ಲಿಸಬೇಕು, ಇಲ್ಲವಾದಲ್ಲಿ ನಾಳೆಯಿಂದ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.