ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ವಾಟಾಳ್ ನಾಗರಾಜ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಹಿನ್ನೆಲೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು.
ಇನ್ನೊಂದೆಡೆ ಕಾವೇರಿ ಹೋರಾಟಕ್ಕಾಗಿ ನಾಡಿದ್ದು ಸೆ.27 ರಂದು ‘ಅಖಂಡ ಕರ್ನಾಟಕ ಬಂದ್’ ಗೆ ಕರೆ ನೀಡಲಾಗಿದ್ದು, 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದೆ.
ಪ್ರಮುಖವಾಗಿ ಹೋಟೆಲ್ ಅಸೋಸಿಯೇಷನ್, ಖಾಸಗಿ ವಾಹನ ಮಾಲೀಕರ ಸಂಘಟನೆಗಳು, ಒಲಾ ಊಬರ್ ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದೆ. ಈಗಾಗಲೇ 104 ಸಂಘಟನೆಗಳು ಬೆಂಬಲ ಘೋಷಿಸಿದೆ.
ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಯಾವುದೇ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.