
ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿದೇಶಿ ಮಹಿಳೆಯ ಬ್ಯಾಗ್ ನಲ್ಲಿ 15 ಲಕ್ಷ ಹಣ ಪತ್ತೆಯಾಗಿದೆ. ಹಣದ ಸಮೇತ ಮಹಿಳೆಯನ್ನು ವಶಕ್ಕೆ ಪಡೆದ ಏರ್ ಪೋರ್ಟ್ ಭದ್ರತಾ ಸಿಬ್ಬಂದಿ ಆದಾಯ ಇಲಾಖೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.
ಈ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ . ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.

