ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ (ಕೆಎಂಡಿಸಿ) 2023-24ನೇ ಸಾಲಿನ ಅನುಷ್ಠಾನಗೋಳಿಸುತ್ತಿರುವ ವಿವಿಧ ಯೋಜನೆಗಳ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ನಿಗಮದ ವಿವಿಧ ಯೋಜನೆಗಳಾದ ಶ್ರಮಶಕ್ತಿಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ಸ್ವಾವಲಂಬಿ ಸಾರಥಿಯೋಜನೆ, ವೃತ್ತಿ ಪ್ರೊತ್ಸಹಯೋಜನೆ, ಗಂಗಾಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 03ರ ವರೆಗೆ ವಿಸ್ತರಿಸಲಾಗಿದೆ.
ಅರಿವು ವಿಧ್ಯಾಭ್ಯಾಸ ಸಾಲ ಯೋಜನೆಗೆ ಕೊನೆಯ ದಿನಾಂಕ ನಿಗದಿ ಪಡಿಸಿರುವುದಿಲ್ಲ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.