99 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಯುವಕನ ಡಿಎಲ್ ʼಸಸ್ಪೆಂಡ್ʼ 28-09-2023 9:55AM IST / No Comments / Posted In: Automobile News, Bike News, Karnataka, Latest News, Live News ಒಟ್ಟು 99 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಬೈಕ್ ಸವಾರನನ್ನು ಬೆಂಗಳೂರು ನಗರ ಸಂಚಾರ ಪೊಲೀಸರು ಕೊನೆಗೂ ಹಿಡಿದು, 56 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಮೈಕೋ ಲೇಔಟ್ ಸಂಚಾರಿ ಪೊಲೀಸರು ಬೈಕ್ ವಶಕ್ಕೆ ಪಡೆದಿದ್ದು ಬೈಕ್ ಸವಾರನ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ದಕ್ಷಿಣ ವಿಭಾಗದ ಟ್ರಾಫಿಕ್ ಡಿಸಿಪಿ ಹಾಗೂ ಅವರ ತಂಡವನ್ನು ಅಭಿನಂದಿಸಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆದಾರರು ವೇಗಾ ಸಿಟಿ ಜಂಕ್ಷನ್ ಬಳಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುತ್ತಿದ್ದ ಸವಾರನ ವಿಡಿಯೋ ಅಪ್ಲೊಡ್ ಮಾಡಿದ ಬಳಿಕ ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸನ್ನ ಕುಮಾರ್ ಎಂಬ ವ್ಯಕ್ತಿಯು ಎಕ್ಸ್ನಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಹಾಗೂ ಅಲೋಕ್ಕುಮಾರ್ರನ್ನು ಟ್ಯಾಗ್ ಮಾಡಿ ಈ ವಿಡಿಯೋ ಹಂಚಿಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಬಗ್ಗೆ ಪ್ರಸನ್ನ ಕುಮಾರ್ ಅಪ್ಲೋಡ್ ಮಾಡಿದ್ದ ವಿಡಿಯೋಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ಸಂಚಾರಿ ಠಾಣೆ ಪೊಲೀಸರು, ಯಾವುದೇ ಸಂಚಾರ ನಿಯಮ ಉಲ್ಲಂಘನೆ ಮಾಡುವುದು ಕಂಡು ಬಂದಲ್ಲಿ ಸೋಶಿಯಲ್ ಮೀಡಿಯಾದ ಮೂಲಕ ಜನರು ನಮಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. Good job @DCPTrSouth & team -Vehicle detained– DL being suspended – FIR registered “ No one is beyond the reach of the law, it’s only matter of time” https://t.co/O6FwwFYnKD — alok kumar (@alokkumar6994) September 27, 2023