ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಬಿಡುಗಡೆ ಆದಾಗಿನಿಂದ ಇಂದಿನವರೆಗೂ ಹೌಸ್ ಫುಲ್ ಆಗಿದೆ. ಈಗಾಗಲೇ 650 ಕೋಟಿ ರೂಪಾಯಿ ಬಾಚಿರುವ ಈ ಚಿತ್ರ ಒಂದರ ಮೇಲೊಂದು ದಾಖಲೆ ಬರೆಯುತ್ತಿದೆ.
ಜೈಲರ್ ಇದೀಗ 50 ದಿನಗಳನ್ನು ಪೂರೈಸಿದ್ದು, ಈ ಸಂತಸವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದೆ.
ನೆಲ್ಸನ್ ದಿಲೀಪ್ ಕುಮಾರ್ ರಚಿಸಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ರಜನಿಕಾಂತ್ ಸೇರಿದಂತೆ ವಿನಾಯಕನ್, ರಮ್ಯಕೃಷ್ಣ, ವಸಂತ್ ರವಿ, ಯೋಗಿ ಬಾಬು, ಸುನಿಲ್, ಕಿಶೋರ್ ತೆರೆ ಹಂಚಿಕೊಂಡಿದ್ದಾರೆ. ಇನ್ನುಳಿದಂತೆ ಮೋಹನ್ ಲಾಲ್, ಶಿವರಾಜ್ ಕುಮಾರ್ ಹಾಗೂ ಜಾಕಿ ಶ್ರಾಫ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸನ್ ಪಿಚ್ಚರ್ಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದು, ಅನಿರುದ್ದ್ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ. ನಿರ್ಮಲ್ ಅವರ ಸಂಕಲನವಿದೆ.