ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
2023-24 ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ಸಂಬಂಧಿಸಿದ ಯೋಜನೆಗಳು ಬ್ಯಾಕ್ಯಾರ್ಡ್ ಮಿನಿ ಆರ್ ಎಸ್ ಘಟಕಗಳ ಸ್ಫಾಪನೆ ಮತ್ತು ಹಿತ್ತಲು ಅಲಂಕಾರಿಕಾ ಮೀನು ಸಾಕಾಣಿಕೆ ಘಟಕ(ಒಳನಾಡು). ಈ ಯೋಜನೆಗಳಿಗೆ ರೈತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಜಿಲ್ಲೆಯ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.