ಬೆಂಗಳೂರು: ಒಂದೆಡೆ ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿದ್ದರೆ ಇನ್ನೊಂದೆಡೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರನ್ನೇ ತನ್ನತ್ತ ಸೆಳೆದು ಆಪರೇಷನ್ ಹಸ್ತದ ಮೂಲಕ ಚುನಾವಣೆಗೆ ಸಿದ್ಧತೆ ನಡೆಸಿದೆ. ಈ ನಡುವೆ ಬಿಜೆಪಿಯ ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಹಲವು ಮಾಜಿ ಶಾಸಕರುಗಳು ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ ಎಂದರು.
ರಾಮಣ್ಣ ಲಮಾಣಿ ಹಾಗೂ ಎಂ.ಪಿ.ಕುಮಾರಸ್ವಾಮಿ ನನ್ನನ್ನು ಮತ್ತೆ ಸಂಪರ್ಕಿಸಿದ್ದರು. ಹಾಗಾಗಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಬಳಿ ಕರೆದೊಯ್ದಿದ್ದೆ. ಮುಂದಿನ ವಾರ ಅವರನ್ನು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದರು.
ಲೀಡರ್ ಲೆಸ್ ಪಾರ್ಟಿ ಹೇಗಿರುತ್ತೆ ಎಂಬುದಕ್ಕೆ ಈಗ ಬಿಜೆಪಿ ಸ್ಪಷ್ಟ ಉದಾಹಣೆಯಾಗಿದೆ. ಬಿಜೆಪಿಯಲ್ಲಿ ಅಸಮಾಧನಗೊಂಡವರು ಸಾಕಷ್ಟು ಜನರಿದ್ದಾರೆ. ಮಾಜಿ ಶಾಸಕರು, ಜಿಲ್ಲಾ, ತಾಲೂಕು ಮುಖಂಡರೂ ನಮ್ಮ ಸಂಪರ್ಕ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬೇಸರಗೊಂಡಿರುವ ದೊಡ್ಡ ಟೀಂ ಇದೆ. ಎಲ್ಲರೂ ಕಾಂಗ್ರೆಸ್ ಗೆ ಬರಲು ಆಸಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.