ಬೆಂಗಳೂರು : ರಾಜ್ಯದ ಪಡಿತರದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ಟೋಬರ್ ನಿಂದಲೇ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ ಇದುವರೆಗೆ ಬರೀ 5 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು, ಮುಂದಿನ ಅಕ್ಟೋಬರ್ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಜೊತೆ ಹೆಚ್ಚುವರಿ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ನೀಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ಕಾಂಗ್ರೆಸ್ ಚುನಾವಣೆ ವೇಳೆ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಅಕ್ಕಿ ಸಿಗದ ಹಿನ್ನೆಲೆ ಬರೀ 5 ಕೆಜಿ ಅಕ್ಕಿ ವಿತರಣೆ ಮಾಡಿ ಉಳಿದ 5 ಕೆಜಿ ಬದಲು ಹಣ ಹಾಕುವ ವ್ಯವಸ್ಥೆ ಜಾರಿಗೆ ಬಂದಿತ್ತು, ಇದೀಗ ಹಣ ಹಾಕುವ ವ್ಯವಸ್ಥೆಗೆ ಬ್ರೇಕ್ ಹಾಕಿ ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ವಿತರಿಸಲಿದೆ.