alex Certify BIGG NEWS : ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ `ಕರ್ನಾಟಕ ಬಂದ್’ : ಈ ಜಿಲ್ಲೆಗಳಲ್ಲಿ `ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ `ಕರ್ನಾಟಕ ಬಂದ್’ : ಈ ಜಿಲ್ಲೆಗಳಲ್ಲಿ `ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ‘ಕಾವೇರಿ ಕಿಚ್ಚು’ ಜೋರಾಗಿದ್ದು, ಇಂದು ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 29ರ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಯಾವ-ಯಾವ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ? ಇಲ್ಲಿದೆ ಮಾಹಿತಿ

ಬೆಂಗಳೂರು ನಗರ ಜಿಲ್ಲೆ

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಇಂದು ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಮನಗರ ಜಿಲ್ಲೆ

ರಾಮನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿಗೆ ಬರಲು ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಬಹುದೆಂದು ಮನಗಂಡು ಹಾಗೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಕರ್ನಾಟಕ ಬಂದ್ ಹಿನ್ನೆಲೆ ಶಾಲಾ-ಕಾಲೇಜು ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಿದ್ದಾರೆ.

ಮೈಸೂರು ಜಿಲ್ಲೆ

ಮೈಸೂರು ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲೆ

ಮಂಡ್ಯ ಜಿಲ್ಲೆಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ಕುಮಾರ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆ
ಹಾಸನ‌ ಜಿಲ್ಲೆಯ ಚನ್ನರಾಯಪಟ್ಟಣ, ಬೇಲೂರು, ಅರಕಲಗೂಡು, ಹಾಸನ, ಆಲೂರು 5 ತಾಲೂಗಳಲ್ಲಿ ಪ್ರಾಥಮಿಕ ಪ್ರೌಢ-ಶಾಲೆಗಳಿಗೆ ಬಿಇಓಗಳು ರಜೆ ಘೋಷನೆ ಮಾಡಿದ್ದಾರೆ. ಇನ್ನು ಪದವಿ ಪೂರ್ವ ಕಾಲೇಜುಗಳಿಗೆ ರಜೆಯ ಒತ್ತಾಯ ಬಂದರೆ ಪ್ರಾಂಶುಪಾಲರು ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಾಮರಾಜನಗರ ಜಿಲ್ಲೆ
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಚಾಮರಾಜನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ವಿವಿ ಪರೀಕ್ಷೆಗಳು ಮುಂದೂಡಿಕೆ
ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ದಾವಣಗೆರೆ ವಿಶ್ವವಿದ್ಯಾಲಯ ಮುಂದೂಡಿದೆ. ವಿವಿಯ ಸ್ನಾತಕೋತ್ತರ ಪದವಿ ಪರೀಕ್ಷೆ ಅ.1ರಂದು ನಡೆಸಲು ವಿಶ್ವವಿದ್ಯಾಲಯ ನಿರ್ಧಾರಿಸಿದೆ. ದಾವಣಗೆರೆ ವಿವಿ ಪರೀಕ್ಷಾಂಗ ಕುಲಸಚಿವ ಡಾ.ಕೆ.ಶಿವಶಂಕರ ಅವರು ಮಾಹಿತಿ ನೀಡಿದ್ದಾರೆ.

ಬಂದ್ ವೇಳೆ ಏನಿರುತ್ತೆ ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ಏನಿರಲ್ಲ..?

1) ರಾಜ್ಯಾದ್ಯಂತ ಚಿತ್ರ ಪ್ರದರ್ಶನ ಸ್ಥಗಿತ.

2) ಓಲಾ, ಊಬರ್, ಆಟೋ ಸೇವೆ ಸ್ಥಗಿತ.

3) ಸಿನಿಮಾ, ಧಾರಾವಾಹಿಗಳ ಶೂಟಿಂಗ್ ಸ್ತಬ್ಧವಾಗಲಿದೆ.

4) ಶಾಲಾ-ಕಾಲೇಜುಗಳು ತೆರೆಯೋದು ಅನುಮಾನ ( ರಜೆ ನೀಡುವ ಅಧಿಕಾರ ಆಯಾ ಜಿಲ್ಲಾಧಿಕಾರಿಗಳಿಗೆ)

5) ಶಾಪಿಂಗ್ ಮಾಲ್ ಬಂದ್.

6) ಹೋಟೆಲ್ ಗಳು ಬಂದ್ ಆಗಲಿದೆ. ( ಊಟ-ತಿಂಡಿ ಸಿಗಲ್ಲ)

7) ಬಂದ್ ನಿಂದ ಕೆಲವು ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿದೆ ಎನ್ನಲಾಗಿದ್ದು, ಸಾರ್ವಜನಿಕರು ಮುಂಚಿತವಾಗಿ ದಿನಸಿ ಸಾಮಾನು ಕೊಂಡುಕೊಳ್ಳುದು ಉತ್ತಮ.

8) ಇಂದು ನಿಗದಿಯಾಗಿದ್ದ ದಾವಣಗೆರೆ, ವಿಟಿಯು, ಕೃಷ್ಣದೇವರಾಯ ವಿವಿ ಪರೀಕ್ಷೆಗಳು ಮುಂದೂಡಿಕೆ

9) ಯಾವುದೇ ಪ್ರತಿಭಟನೆ, ಮೆರವಣಿಗೆಗೆ ಅವಕಾಶ ಇಲ್ಲ

10) ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸಂಪೂರ್ಣ ಬಂದ್

11) ಖಾಸಗಿ ಬಸ್ ಗಳ ಸಂಚಾರ ಇರಲ್ಲ.

12) ಬೇಕರಿ, ಅಂಗಡಿಗಳು ಮುಚ್ಚಿರುತ್ತವೆ.

13) ಜ್ಯುವೆಲ್ಲರಿ ಶಾಪ್ ಬಂದ್

14) ಬೀದಿ ಬದಿ ಸಿಗುವ ಊಟ-ತಿಂಡಿ, ವ್ಯಾಪಾರ ಬಂದ್

ಏರ್ ಪೋರ್ಟ್ ಟ್ಯಾಕ್ಸಿ ಚಾಲಕ ಸಂಘ, ಖಾಸಗಿ ಸಾರಿಗೆ ಸಂಘಟನೆ, ಬಿಬಿಎಂಪಿ ನೌಕರರ ಸಂಘ, ಶಾಲಾ ಸಂಘಟನೆಗಳಾದ ರುಪ್ಸ, ಕ್ಯಾಮ್ಸ್, ಬಾರ್ ಆಂಡ್ ರೆಸ್ಟುರೆಂಟ್ ಅಸೋಸಿಯೇಶನ್ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲ ನೀಡಿದೆ. ಕಬ್ಬು ಬೆಳೆಗಾರರ ಸಮಿತಿ ಕರವೇ ನಾರಾಯಣ ಗೌಡರ ಬಣ ಕರ್ನಾಟಕ ಬಂದ್ ಗೆ ಬೆಂಬಲ ನೀಡಿಲ್ಲ ಎನ್ನಲಾಗುತ್ತಿದೆ.

ಏನಿರುತ್ತೆ..?

1) ಹಾಲು, ದಿನ ಪತ್ರಿಕೆ ಸೇವೆ ಎಂದಿನಂತೆ ಇರಲಿದೆ.

2) ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಸೇರಿದಂತೆ ಸರ್ಕಾರದ ಎಲ್ಲಾ ಸಾರಿಗೆ ಬಸ್ ಸಂಚಾರ ಎಂದಿನಂತೆ ಇರಲಿದೆ.

3) ವೈದ್ಯಕೀಯ ಸೇವೆಗಳು, ಮೆಡಿಕಲ್ ಶಾಪ್ ಓಪನ್ ಇರಲಿದೆ.

4) ಆಂಬುಲೆನ್ಸ್ , ಅಗ್ನಿಶಾಮಕ ದಳ, ಪೆಟ್ರೋಲ್ ಬಂಕ್ , ಪೊಲೀಸ್ ಸೇವೆ ಸೇರಿದಂತೆ ಎಲ್ಲಾ ತುರ್ತು ಸೇವೆ ಸಿಗಲಿದೆ.

ಇನ್ನೂ, ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿಯಾಗಲಿದೆ , ಒಂದು ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...