ಬೆಂಗಳೂರು : ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಬಂದ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಇಂದು ನಾವು ಕೇವಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಚಳುವಳಿ ಮಾಡುತ್ತೇವೆ. ಬಳಿಕ ಸಿಎಂ ಮನೆಗೆ ಮುತ್ತಿಗೆ ಹಾಕುತ್ತೇವೆ. ಆದರೆ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.
ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, 100 ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ.