ನವದೆಹಲಿ: ಡಿಸೆಂಬರ್, ಜನವರಿಯಲ್ಲಿ ಬ್ಯಾಂಕ್ ಸಿಬ್ಬಂದಿ ಹಂತ ಹಂತವಾಗಿ 13 ದಿನಗಳ ಕಾಲ ಮುಷ್ಕರ ಕೈಗೊಂಡಿದ್ದಾರೆ. ಬ್ಯಾಂಕುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಉದ್ದೇಶಪೂರ್ವಕವಾಗಿ ಉದ್ಯೋಗಿಗಳ ಸಂಖ್ಯೆ ಕಡಿಮೆ ಮಾಡಲಾಗಿದ್ದು, ಗ್ರಾಹಕರ ಸೇವೆಗೆ ತೊಂದರೆಯಾಗುತ್ತಿದೆ ಎಂದು ಹೇಳಲಾಗಿದೆ. ನಿಯಮಿತ ಉದ್ಯೋಗಗಳನ್ನು ಹೊರಗುತ್ತಿಗೆ ನೀಡುವುದನ್ನು ಸಂಘಟನೆಗಳು ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಿವೆ.
ಡಿಸೆಂಬರ್ 11ರಂದು ಖಾಸಗಿ ಬ್ಯಾಂಕುಗಳ ನೌಕರರು ಮುಷ್ಕರ ನಡೆಸಲಿದ್ದಾರೆ. ಡಿಸೆಂಬರ್ 4ರಿಂದ ಮುಷ್ಕರ ಆರಂಭವಾಗಲಿದ್ದು, ಜನವರಿ 20ರವರೆಗೆ ವಿವಿಧ ಹಂತಗಳಲ್ಲಿ ಮುಂದುವರೆಯುತ್ತದೆ.
ಡಿಸೆಂಬರ್ 4ರಂದು ಎಸ್.ಬಿ.ಐ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಉದ್ಯೋಗಿಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ.
ಡಿಸೆಂಬರ್ 5 ರಂದು ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಇಂಡಿಯಾ ನೌಕರರು ಮುಷ್ಕರ ಕೈಗೊಂಡಿದ್ದಾರೆ.
ಡಿಸೆಂಬರ್ 6 ರಂದು ಕೆನರಾ ಬ್ಯಾಂಕ್, ಯುಕೋ ಬ್ಯಾಂಕ್ ನೌಕರರು ಮುಷ್ಕರ ನಡೆಸಲಿದ್ದಾರೆ.
ಡಿಸೆಂಬರ್ 7 ರಂದು ಇಂಡಿಯನ್ ಬ್ಯಾಂಕ್, ಯುಕೋ ಬ್ಯಾಂಕ್ ನೌಕರರು ಮುಷ್ಕರ ಕೈಗೊಂಡಿದ್ದಾರೆ.
ಡಿಸೆಂಬರ್ 8 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ ನೌಕರರು ರಾಷ್ಟ್ರವ್ಯಾಪ್ತಿ ಮುಷ್ಕರ ನಡೆಸಲಿದ್ದಾರೆ.
ಜನವರಿ 2 ರಂದು ಕರ್ನಾಟಕ, ತಮಿಳುನಾಡು, ಆಂಧ್ರ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಬ್ಯಾಂಕುಗಳ ನೌಕರರು ಮುಷ್ಕರ ಕೈಗೊಂಡಿದ್ದಾರೆ.
ಜನವರಿ 19, 20 ರಂದು ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ ಉದ್ಯೋಗಿಗಳು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ.