
ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಬಂದ್ ಮಾಡದಂತೆ ಸಂಘಟನೆಗಳಿಗೆ ಮನವಿ ಮಾಡಿದ್ದೇವೆ. ನಾವು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕಾನೂನಿನ ಪ್ರಕಾರ ಬಂದ್ ಮಾಡಬಾರದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ನಿಯಮ ಉಲ್ಲಂಘಿಸಿದರೇ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ, ಸುಖ ಸುಮ್ಮನೆ ಬಂಧಿಸುವುದಿಲ್ಲ. ಕಾನೂನು ವಿರುದ್ಧ ನಡೆದುಕೊಂಡರೆ ಬೇರೆ ಬಂಧಿಸದೇ ಬೇರೆ ವಿಧಿಯಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

