ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದ್ದು, ವಿನಯ್ ಪರ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಹೈಕೋರ್ಟ್ ತಿರಸ್ಕರಿಸಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದ ಸಾಕ್ಷಿ ಗುರುನಾಥ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪೊಲೀಸರು ವಿನಯ್ ಕುಲಕರ್ಣಿ ಪರ ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಹೈಕೋರ್ಟ್ ತಿರಸ್ಕರಿಸಿ ತನಿಖೆ ಮುಂದುವರಿಸುವಂತೆ ಆದೇಶ ಹೊರಡಿಸಿದೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ವರ್ಗಾಯಿಸಿತ್ತು, ನಂತರ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂಕೋರ್ಟ್, ನ್ಯಾಯಾಲಯದ ಅನುಮತಿ ಪಡೆಯದೆ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ 4 ಷರತ್ತು ವಿಧಿಸಿತ್ತು.