HomeEntertainmentBIG NEWS: ಕಾವೇರಿ ವಿವಾದ: ಎರಡೂ ಸರ್ಕಾರಗಳು ಕೂತು ಮಾತನಾಡಬೇಕು; ನಟ ರಿಷಬ್ ಶೆಟ್ಟಿ

BIG NEWS: ಕಾವೇರಿ ವಿವಾದ: ಎರಡೂ ಸರ್ಕಾರಗಳು ಕೂತು ಮಾತನಾಡಬೇಕು; ನಟ ರಿಷಬ್ ಶೆಟ್ಟಿ

ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಳ್ಳುತ್ತಿದೆ. ಈ ನಡುವೆ ಸಿಡಬ್ಲುಎಂಎ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ, ನಮಗೇ ನೀರಿಲ್ಲ ಬೇರೆಯವರಿಗೆ ಕೊಡಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

ಮಳೆ ಇಲ್ಲದೇ ಡ್ಯಾಂ ಗಳು ಭರ್ತಿಯಾಗಿಲ್ಲ. ಯಾವ ಜಲಾಶಯಗಳಲ್ಲಿಯೂ ನೀರಿಲ್ಲ. ರೈತರ ಬೆಳೆಗಳಿಗೆ ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿದ್ದಾರೆ. ನಮಗೇ ನೀರಿಲ್ಲದಿರುವಾಗ ಬೇರೆಯವರಿಗೆ ಕೊಡಲು ಹೇಗೆ ಆಗುತ್ತದೆ? ನಮ್ಮ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾವೇರಿ ನೀರಿನ ಸಮಸ್ಯೆ ಬಗ್ಗೆ ಎರಡೂ ಸರ್ಕಾರಗಳು ಕೂತು ಮಾತನಾಡಬೇಕು. ರೈತರಿಗೆ ನ್ಯಾಯ ಒದಗಿಸಬೇಕು. ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಗಟ್ಟಿ ನಿಲುವು ತಾಳಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular