ನವದೆಹಲಿ : ಲೋಕಸಭೆ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನಾ ವಿಧೇಯಕ’ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದರು.
ಲೋಕಸಭೆ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33 ರಷ್ಟು ಮೀಸಲಾತಿ ಕಲ್ಪಿಸುವ ನಾರಿ ಶಕ್ತಿ ವಂದನಾ ವಿಧೇಯಕ್ಕೆ ಲೋಕಸಭೆಯಲ್ಲಿ 452-2 ಮತಗಳಿಂದ ಅಂಗೀಕಾರಗೊಂಡಿತ್ತು. ಲೋಕಸಭೆಯಲ್ಲಿ ಅನುಮೋದನೆಗೊಂಡಿದ್ದ ವಿಧೇಯಕಕ್ಕೆ ರಾಜ್ಯಸಭೆಯಲ್ಲಿಯೂ ಅನುಮೋದನೆ ದೊರೆತಿತ್ತು, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡ ವಿಧೇಯಕವನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳಿಸಿಕೊಡಲಾಗಿತ್ತು. ಇಂದು ನಾರಿ ಶಕ್ತಿ ವಂದನಾ ವಿಧೇಯಕ್ಕೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆ ನೀಡಲಾಗಿತ್ತು.
ಮಹಿಳಾ ಮೀಸಲಾತಿ ಮಸೂದೆ ಎಂದರೇನು?
ಮಹಿಳಾ ಮೀಸಲಾತಿ ಮಸೂದೆಯ ಬೇಡಿಕೆ ಕಳೆದ 27 ವರ್ಷಗಳಿಂದ ನಡೆಯುತ್ತಿದೆ. ಈ ಮಸೂದೆಯ ಅನುಷ್ಠಾನದ ನಂತರ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಾಯ್ದಿರಿಸಲಾಗುವುದು. ಈ ಮಸೂದೆಯ ಪ್ರಕಾರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಎಸ್ಸಿ-ಎಸ್ಟಿ ಸಮುದಾಯದ ಮಹಿಳೆಯರಿಗೆ ಮೀಸಲಿಡಲಾಗುವುದು.
ಈ ಕಾಯ್ದಿರಿಸಿದ ಸ್ಥಾನಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಿವಿಧ ಪ್ರದೇಶಗಳಲ್ಲಿ ರೊಟೇಶನ್ ವ್ಯವಸ್ಥೆಯ ಮೂಲಕ ಹಂಚಿಕೆ ಮಾಡಬಹುದು. ಮಹಿಳಾ ಮೀಸಲಾತಿ ಮಸೂದೆಯ ಪ್ರಕಾರ, ಮಹಿಳೆಯರಿಗೆ ಸ್ಥಾನಗಳನ್ನು 15 ವರ್ಷಗಳವರೆಗೆ ಮಾತ್ರ ಕಾಯ್ದಿರಿಸಲಾಗುತ್ತದೆ. ಪ್ರತಿ ಲೋಕಸಭಾ ಚುನಾವಣೆಯ ನಂತರ ಮೀಸಲು ಸ್ಥಾನಗಳನ್ನು ಬದಲಾಯಿಸಬೇಕು ಎಂದು ಮಸೂದೆ ಪ್ರಸ್ತಾಪಿಸುತ್ತದೆ. ಕಾಯ್ದಿರಿಸಿದ ಸ್ಥಾನಗಳನ್ನು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದ ವಿವಿಧ ಕ್ಷೇತ್ರಗಳಲ್ಲಿ ರೊಟೇಶನ್ ಮೂಲಕ ಹಂಚಿಕೆ ಮಾಡಬಹುದು.