HomeKarnatakaವಾಣಿಜ್ಯ ತೆರಿಗೆ ಇಲಾಖೆ 230 ಪರಿವೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ವಾಣಿಜ್ಯ ತೆರಿಗೆ ಇಲಾಖೆ 230 ಪರಿವೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಲ್ಲಿರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ಕರ್ನಾಟಕ ಲೋಕಸೇವಾ ಆಯೋಗ ವಿಸ್ತರಿಸಿದೆ.

ಈ ಮೊದಲು ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಕೆಗೆ ತೊಂದರೆಯಾದ ಹಿನ್ನೆಲೆಯಲ್ಲಿ ಲೋಕ ಸೇವಾ ಆಯೋಗ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ನಿಗದಿಪಡಿಸಲಾಗಿದ್ದ ಪರೀಕ್ಷಾ ದಿನಾಂಕಗಳನ್ನು ಬದಲಾಯಿಸಲಾಗಿದೆ. 2024ರ ಜನವರಿ 6, 7ರಂದು ಕಲ್ಯಾಣ ಕರ್ನಾಟಕ, ಜನವರಿ 20 ಮತ್ತು 21 ರಂದು ರಾಜ್ಯದ ಉಳಿದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular