ಬೆಂಗಳೂರು : ‘ಗೃಹಲಕ್ಷ್ಮಿ’ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ಹಣ ನೀಡಲಾಗುತ್ತಿದ್ದು, ಮೊದಲನೇ ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ ಇದೀಗ 2ನೇ ಕಂತಿನ ಹಣ ಬಿಡುಗಡೆ ಮಾಡುತ್ತಿದೆ.
ಗೃಹಲಕ್ಷ್ಮಿ ಯೋಜನೆ ಹಣವನ್ನು ಹಂತ ಹಂತವಾಗಿ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ವರ್ಗಾವಣೆ ಮಾಡಲಾಗುತ್ತಿದೆ. ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ..? ನಿಮ್ಮ ಅರ್ಜಿ ಸ್ಥಿತಿ ಯಾವ ರೀತಿ ಇದೆ ಎನ್ನುವುದನ್ನು ಚೆಕ್ ಮಾಡಿಕೊಂಡು ಹಣ ಬರುತ್ತದೆಯೋ ಇಲ್ಲವೋ ಎನ್ನುವುದನ್ನು ದೃಢಪಡಿಸಿಕೊಳ್ಳಿ.ಇತ್ತೀಚೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಗೃಹಲಕ್ಷ್ಮಿ ಯೋಜನೆ ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಸರ್ಕಾರ ಅವಕಾಶ ನೀಡಿತ್ತು. ಆದರೆ ಅದೀಗ ಸ್ಥಗಿತಗೊಂಡಿದ್ದು, ಗೃಹಲಕ್ಷ್ಮಿ ಮಂಜೂರಾತಿ ಪತ್ರ ಅಥವಾ ಪಡಿತರ ಚೀಟಿ ಸಂಖ್ಯೆಯನ್ನು ತೆಗೆದುಕೊಂಡು ಹೋಗಿ ಹತ್ತಿರದಲ್ಲಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಗ್ರಾಮ ಒನ್ ಸೇವಾಕೇಂದ್ರಗಳಲ್ಲಿ ಗೃಹಲಕ್ಷ್ಮೀ ಯೋಜನೆ ಸ್ಟೇಟಸ್ ಚೆಕ್ ಮಾಡಿಸಿಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನರಿಗೆ ಮಾಸಿಕ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಈ ಯೋಜನೆಗಾಗಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳ ಅವಧಿಗೆ 4600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.ಮಹಿಳೆಯರು ತಮ್ಮ ಖಾತೆಗಳಿಗೆ ಆಧಾರ್ ಲಿಂಕ್ ಆಗಿಲ್ಲ ಎಂದರೆ ಅಥವಾ ಆಧಾರ್ ಲಿಂಕ್ ಆಗಿದ್ದರು ಆ ಖಾತೆ ಆಕ್ಟಿವ್ ಆಗಿಲ್ಲ ಎಂದರೆ ಇದನ್ನು ಸರಿಪಡಿಸಿಕೊಳ್ಳಬೇಕು.