HomeKarnatakaಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ; ವಿದ್ಯಾರ್ಥಿ ದುರ್ಮರಣ

ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ; ವಿದ್ಯಾರ್ಥಿ ದುರ್ಮರಣ

ಬಾಗಲಕೋಟೆ: ಚಿಕ್ಕ ಮಕ್ಕಳು, ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. 9 ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.

15 ವರ್ಷದ ರಾಹುಲ್ ಕೋಲಕಾರ ಮೃತ ಬಾಲಕ. ಜಮಖಂಡಿ ತಾಲೂಕಿನ ಇನಾಮ ಹಂಚಿನಾಳ ಗ್ರಾಮದ ನಿವಾಸಿ. ರಾಹುಲ್, ಹುಲ್ಯಾಳ ಗ್ರಾಮದ ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ. ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿ ಕುಸಿದು ಬಿದ್ದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ವಿದ್ಯಾರ್ಥಿಯನ್ನು ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ವಿದ್ಯಾರ್ಥಿಗೆ ಹೃದಯ ಸಂಬಂಧಿ ಕಾಯಿಲೆಯೂ ಇತ್ತು. ಆತ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular