HomeKarnatakaಹಿರಿಯ ನಾಗರಿಕರಿಗೆ ಸಿಎಂ ಗುಡ್ ನ್ಯೂಸ್: ವೃದ್ಧಾಪ್ಯ ವೇತನ ಮಾಸಾಶನ ಹೆಚ್ಚಳ ಘೋಷಣೆ

ಹಿರಿಯ ನಾಗರಿಕರಿಗೆ ಸಿಎಂ ಗುಡ್ ನ್ಯೂಸ್: ವೃದ್ಧಾಪ್ಯ ವೇತನ ಮಾಸಾಶನ ಹೆಚ್ಚಳ ಘೋಷಣೆ

ಬೆಂಗಳೂರು: ವೃದ್ಧಾಪ್ಯ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈಗಿರುವ 1200 ರೂ. ಮಾಸಾಶನವನ್ನು ಬಜೆಟ್ ನಲ್ಲಿ ಏರಿಕೆ ಮಾಡಲಾಗುವುದು. ಎಷ್ಟು ಎಂದು ಈಗಲೇ ಹೇಳುವುದಿಲ್ಲ ಎಂದು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿರಿಯ ನಾಗರಿಕರಿಗೆ 1200 ರೂ. ಮಾಸಾಶನ ನೀಡುತ್ತಿದ್ದು, 2000 ರೂ.ಗೆ ಏರಿಕೆ ಮಾಡಬೇಕೆಂಬ ಬೇಡಿಕೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಮಾಸಾಶನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳುತ್ತೇವೆ. ಎಷ್ಟು ಹೆಚ್ಚಳ ಮಾಡುತ್ತೇವೆ ಎಂದು ಈಗಲೇ ಹೇಳುವುದಿಲ್ಲ. ಬಜೆಟ್ ನಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular