BIG NEWS: ನಿಷೇಧಾಜ್ಞೆ ಜಾರಿ ಬಳಿಕ ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣ, ಹಲವರು ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ ಶಾಂತಿನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಬಳಿಕ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ತಿಳಿಸಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಇದರ ನಂತರ ವಾತಾವರಣ ಪ್ರಕ್ಷುಬ್ಧಗೊಂಡಿತ್ತು. ಹುಡುಗರ ಗುಂಪೊಂದು ದಾಂದಲೆ ನಡೆಸಲು ಸಿದ್ಧತೆ ಮಾಡಿಕೊಂಡಿತ್ತು. ಕೆಲವರು ದಾಂದಲೆ ನಡೆಸಿದ್ದರು. ಹೀಗಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಯಾವುದೇ ತೊಂದರೆ ಆಗಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ಗಾಯಾಳು, ಆಸ್ತಿಪಾಸ್ತಿ ಹಾನಿ ಆದವರಿಗೆ ದೂರು ಕೊಡುವಂತೆ ಹೇಳಿದ್ದೇವೆ. ಎಷ್ಟು ಜನರನ್ನು ವಶಕ್ಕೆ ಪಡೆದಿದ್ದೇವೆ. ಎಷ್ಟು ದೂರು ದಾಖಲಾಗಿದೆ ಎಂದು ನಂತರ ತಿಳಿಸುತ್ತೇನೆ. ಸಾರ್ವಜನಿಕರು ಸೇರಿದಂತೆ ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿವೆ. ಎಲ್ಲರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ದುಷ್ಕರ್ಮಿಗಳ ಕೃತ್ಯವನ್ನು ವಿಡಿಯೋಗಳಲ್ಲಿ ಪರಿಶೀಲಿಸಲಾಗುತ್ತಿದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುವ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read