HomeKarnatakaBIG NEWS : ಸಂಕ್ರಾಂತಿ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ...

BIG NEWS : ಸಂಕ್ರಾಂತಿ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾಂಬ್

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾಂಬ್ಬೆಂಗಳೂರು : ಸಂಕ್ರಾಂತಿ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ, ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಡಿಸಿಎಂ ಡಿಕೆ ಶಿವಕುಮಾರ್ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ, ಕೆಲವರು ನನ್ನ ಜೊತೆ ವೈಯಕ್ತಿಕವಾಗಿ ಮಾತನಾಡಿದ್ದಾರೆ. ತಮ್ಮ ನೋವನ್ನ ಹೇಳಿಕೊಂಡಿದ್ದಾರೆ. ನೋಡಿ ಬೇಕಾದರೆ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸಂಕ್ರಾಂತಿ ನಂತರ ಕಾದು ನೋಡಿ..ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದು ಅನುಮಾನ. ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular