ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹಲವು ಫಲಾನುಭವಿಗಳ ಖಾತೆಗೆ 2,000 ರೂ. ಹಣ ವರ್ಗಾವಣೆ ಮಾಡಲಾಗಿದೆ.ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಆಧಾರ್, ಬ್ಯಾಂಕ್ ಕೆವೈಸಿ ಮಾಡದೇ ಇರುವವರಿಗೆ ಗೃಹಲಕ್ಷ್ಮೀ ಹಣ ವರ್ಗಾವಣೆ ಆಗಿಲ್ಲ.
ಇನ್ನೂ ಕೂಡ ಅನೇಕರಿಗೆ ತಮ್ಮ ಗೃಹಲಕ್ಷ್ಮಿ ಯೋಜನೆಗೆ ಸ್ಟೇಟಸ್ ಏನಾಗಿದೆ ಎಂದು ತಿಳಿದುಕೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ಮಾಹಿತಿಯನ್ನು ಈ ಮೂಲಕ ತಿಳಿಸಿಕೊಡುತ್ತಿದ್ದೇವೆ.ಮೊದಲು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಇರುವ ಸೇವಾ ಸಿಂಧು ಪೋರ್ಟಲ್ ಗೆ (Sevasindhu portal) ಭೇಟಿ ನೀಡಬೇಕು.
https://sevasindhugs.karnataka.gov.in/ ಲಿಂಕ್ ಮೂಲಕ. ಮುಖಪುಟದಲ್ಲಿ ಗ್ಯಾರಂಟಿ ಯೋಜನೆಗಳ ಹಲವು ಆಪ್ಷನ್ ಇರುತ್ತದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಸೆಲೆಕ್ಟ್ ಮಾಡಿ, ರೇಷನ್ ಕಾರ್ಡ್ ಸಂಖ್ಯೆಯನ್ನು ಕೇಳಲಾಗುತ್ತದೆ. RD ನಂಬರ್ ಹಾಕಿ ಸಬ್ಮಿಟ್ ನೀಡಿದರೆ ರೇಷನ್ ಕಾರ್ಡ್ ನಂಬರ್ ಫಲಾನುಭವಿಯ ಹೆಸರು ಅರ್ಜಿ ಸ್ಥಿತಿಯ ಸಂಪೂರ್ಣ ಮಾಹಿತಿ ಬರುತ್ತದೆ. ಈ ಮೂಲಕ ನೀವು ತಮ್ಮ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ತಿಳಿದುಕೊಳ್ಳಬಹುದು.
ಇನ್ನೂ ಯೋಜನೆಯ ಹಣ ಬಾರದೇ ಇದ್ದವರು ನಿಮ್ಮ ರೇಷನ್ ಕಾರ್ಡ್ ಗೆ KYC ಅಪ್ಡೇಟ್ ಆಗಿದೆಯೇ ಎನ್ನುವುದನ್ನು ತಿಳಿದುಕೊಳ್ಳಿ. ಆಗದೇ ಇದ್ದಲ್ಲಿ ಕೂಡಲೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗುವ ಮೂಲಕ KYC ಅಪ್ಡೇಟ್ ಮಾಡಿಸಿಕೊಳ್ಳಿ.ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಕೊಂಡಿರುವ ಫಲಾನುಭವಿಗಳಲ್ಲಿ ಯಾರಿಗೆ ಮೊದಲ ಕಂತಿನ ಹಣ ಬಂದಿಲ್ಲ ಅಂತಹವರು ತಮ್ಮ ಬ್ಯಾಂಕ್ಗಳಲ್ಲಿ ಇ-ಕೆವೈಸಿ ಹಾಗೂ ಆಧಾರ್ ಜೋಡಣೆ ಮಾಡಿಕೊಂಡರೆ ಯೋಜನೆ ಹಣ ಜಮಾ ಆಗಲಿದೆ.
ಇ-ಕೆವೈಸಿ ಮಾಡದ ಕಾರ್ಡ್ಗಳಿಗೆ ಗೃಹ ಲಕ್ಷ್ಮೀ ಹಣ ಜಮೆ ಆಗಿಲ್ಲ ಹೀಗಾಗಿ ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ದಾಖಲೆಯನ್ನು ಕೊಟ್ಟು ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ.