HomeKarnatakaBIG NEWS: ಲಿಂಗಾಯಿತ ಅಧಿಕಾರಿಗಳಿಗೆ ಅನ್ಯಾಯವಾಗಿದ್ದು ನಿಜ; ಮತ್ತೆ ಅಸಮಾಧಾನ ಹೊರಹಾಕಿದ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

BIG NEWS: ಲಿಂಗಾಯಿತ ಅಧಿಕಾರಿಗಳಿಗೆ ಅನ್ಯಾಯವಾಗಿದ್ದು ನಿಜ; ಮತ್ತೆ ಅಸಮಾಧಾನ ಹೊರಹಾಕಿದ ಶಾಮನೂರು ಶಿವಶಂಕರಪ್ಪ ಹೇಳಿದ್ದೇನು?

ದಾವಣಗೆರೆ: ಲಿಂಗಾಯಿತ ಅಧಿಕಾಗಳಿಗೆ ಅನ್ಯಾಯವಾಗಿದ್ದು ನಿಜ. ಒಬ್ಬ ಜಿಲ್ಲಾಧಿಕಾರಿಯನ್ನೂ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಲಿಂಗಾಯಿತ ಅಧಿಕಾರಿಗಳಿಗೆ ಅನ್ಯಾಯವಾಗಿದ್ದು ಸತ್ಯ. ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ ಎಲ್ಲಿ ತೊಂದರೆಯಾಗಿದೆ ಎಂಬುದನ್ನು ಹೇಳುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆಯ 7 ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ಆ ಬಗ್ಗೆ ನಾನು ಪ್ರಶ್ನೆ ಮಾಡುತ್ತಿಲ್ಲ. ಲಿಂಗಾಯಿತ ಐಎಎಸ್, ಕೆಎಸ್ಎಸ್, ಐಪಿಎಸ್ ಅಧಿಕಾರಿಗಳ ಬಗ್ಗೆ ಹೇಳುತ್ತಿದ್ದೇನೆ. ನಾನು ಸತ್ಯ ಹೇಳಿದ್ದೇನೆ. ಅದಕ್ಕೆ ರಾಜ್ಯಾದ್ಯಂತ ಚರ್ಚೆಯಾಗ್ತಿದೆ ಎಂದರು.

ಹೆಚ್.ವಿಶ್ವನಾಥ್ ರೀತಿ ಯಾರಿಗೋ ಬೆಣ್ಣೆ ಹಚ್ಚಿ ಎಂಎಲ್ ಸಿ ಆಗಿಲ್ಲ. ಎಲ್ಲಿ ಯಾರಿಗೆ ಅನ್ಯಾಯವಾಗಿದೆ ಎಂಬುದನ್ನು ನಾನು ಸಿಎಂ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular