ಬೆಂಗಳೂರು: ಗ್ಯಾರಂಟಿ ಯೋಜನೆಗಳು ಜಾರಿಯಾದ ನಂತರ ರಾಜ್ಯದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ಭಾರಿ ಹೆಚ್ಚಳವಾಗಿದೆ. ಕಳೆದ ವರ್ಷದ ಸೆಪ್ಟೆಂಬರ್ ಗೆ ಹೋಲಿಸಿದರೆ ಈ ವರ್ಷ ಶೇಕಡ 20ರಷ್ಟು ಜಿ.ಎಸ್.ಟಿ. ಹೆಚ್ಚಳವಾಗಿದೆ.
ಗ್ಯಾರಂಟಿ ಯೋಜನೆಯ ನಂತರ ವ್ಯಾಪಾರ ವಹಿವಾಟು ಹೆಚ್ಚಳವಾಗಿದ್ದು, ಇದರ ಪರಿಣಾಮ ಜಿಎಸ್‌ಟಿ ಸಂಗ್ರಹದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಸೆಪ್ಟೆಂಬರ್ ನಲ್ಲಿ 11,693 ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡ 20ರಷ್ಟು ಹೆಚ್ಚು ಜಿ.ಎಸ್.ಟಿ. ಸಂಗ್ರಹವಾಗಿದೆ.