alex Certify ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಪ್ರತಿ ಜಿಲ್ಲಾ ಕೇಂದ್ರದಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಪ್ರತಿ ಜಿಲ್ಲಾ ಕೇಂದ್ರದಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ

ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು,ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು ಎನ್ನುವುದು ನಮ್ಮ ಉದ್ದೇಶ. ಶೀಘ್ರದಲ್ಲೇ ಈ ಕುರಿತು ಯೋಜನೆ ಜಾರಿಗೊಳಿಸಲಾಗುವುದು. ತಂದೆ- ತಾಯಿ, ಹಿರಿಯರು ನಮಗೆ ಕಣ್ಣಿಗೆ ಕಾಣುವ ದೇವರು. ಹಿರಿಯ ನಾಗರಿಕರ ಯೋಗಕ್ಷೇಮ ಕೇಂದ್ರದಲ್ಲಿ ಅನೇಕ ನೂನ್ಯತೆಗಳಿವೆ. ಅವುಗಳಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ಇಂದಿನ ಯುವಪೀಳಿಗೆ ಮೇಲಿದೆ‌‌. ಹಿರಿಯ ಜೀವಗಳ ಮನಸ್ಸನ್ನು ನೋಯಿಸದೆ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಈ ದೇಶ ರಾಮನ ದೇಶ, ಶ್ರವಣಕುಮಾರನ ದೇಶ, ತಂದೆ-ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ ಯುವ ಜನತೆ ಬೆಳೆಯಬೇಕು. ನಮ್ಮ ಸಂಸ್ಕೃತಿಯನ್ನು ಮರೆಯದೇ ಮುನ್ನಡೆಯಬೇಕು. ಅಲ್ಲದೆ, ತಂದೆ ತಾಯಿಗೆ ಯಾರು ಗೌರವ ಕೊಡುತ್ತಾರೊ ಅಂತಹವರು ಜೀವನದಲ್ಲಿ ಮುಂದೆ ಬರುತ್ತಾರೆ ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...