ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಗ್ರಾಮಗಳ ವ್ಯಾಜ್ಯಗಳ ಇತ್ಯರ್ಥಕ್ಕೆ ರಾಜ್ಯಾದ್ಯಂತ 1,000 ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 2023 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಅವರು, ಆಯಾ ಗ್ರಾಮ, ಹಳ್ಳಿಗಳ ವ್ಯಾಜ್ಯಗಳು ಬಗೆಹರಿಸಲು ರಾಜ್ಯಾದಯ್ಂತ 1 ಸಾವಿರ ಗ್ರಾಮ ನ್ಯಾಯಾಲಯಗಳ ಸ್ಥಾಪನಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
2008 ರಲ್ಲಿ ಗ್ರಾಮ ನ್ಯಾಯಾಲಯಗಳ ಕಲ್ಪನೆ, ಸ್ಪಷ್ಟತೆ ಬಂದಿದೆ. ನಿಯಮಗಳನ್ನು ರೂಪಿಸಿ ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಅಲೋಚಿಸಲಾಗುತ್ತಿದೆ ಎಂದರು.