HomeKarnatakaBIG NEWS: ಗೃಹ ಇಲಾಖೆಗೆ ಡಿಸಿಎಂ ಪತ್ರ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

BIG NEWS: ಗೃಹ ಇಲಾಖೆಗೆ ಡಿಸಿಎಂ ಪತ್ರ ವಿಚಾರ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಳಗಾವಿ: ಕೋಮುಗಲಭೆ ಪ್ರಕರಣ ಕೈಬಿಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣ ಹಿಂಪಡೆಯುವ ಯಾವ ಪ್ರಸ್ತಾಪವೂ ಇಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುವ ವಿಚಾರವಾಗಿ ಗೃಹ ಇಲಾಖೆಗೆ ಪತ್ರ ಬರೆದಿರುವ ಬಗ್ಗೆ ಪ್ರಕರಣಗಳನ್ನು ಹಿಂಪಡೆಯುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಆ ಪತ್ರವನ್ನು ನಾನು ಇಂದೇ ನೋಡಿದ್ದು. ಯಾವುದೇ ಕೇಸ್ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular