ಕಲಬುರ್ಗಿ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಹಲವು ತಾಲೂಕುಗಳನ್ನು ಈಗಾಗಲೇ ಬರ ಪೀಡಿತ ಎಂದು ಘೋಷಿಸಲಾಗಿದೆ. ರಾಜ್ಯದ ಬರದ ಬಗ್ಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ ನೀಡಿ ಅಧ್ಯಯನ ನಡೆಸಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಅಕ್ಟೋಬರ್ 10ರಂದು ಕೇಂದ್ರ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಲಿದೆ. ಅಧಿಕಾರಿಗಳ 3 ತಂಡ ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ ಎಂದರು.
ಬೆಳೆ ಸರ್ವೆ ನಡೆಸುವಂತೆ ಈಗಾಗಲೇ ನಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅ.10ರೊಳಗೆ ಸರ್ವೆ ಕೆಲಸ ಉಗಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.