
ಮೃತರನ್ನು ಹನುಮಂತ (23) ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಾಲೇಜೊಂದರಲ್ಲಿ ಬಿಎಸ್ ವ್ಯಾಸಂಗ ಮಾಡುತ್ತಿದ್ದು, ಮಂಗಳವಾರ ಬೆಳಗ್ಗೆ ರೈಲ್ವೆ ಟ್ರ್ಯಾಕ್ ನಲ್ಲಿ ಈತನ ಶವ ಪತ್ತೆಯಾಗಿದೆ. ಈತನನ್ನು ಕೊಲೆ ಮಾಡಿ ರೈಲ್ವೆ ಟ್ರ್ಯಾಕ್ ಹತ್ತಿರ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

