ಕೋಲಾರ: ಕೋಲಾರದ ಇಟಿಸಿಎಂ ವೃತ್ತದಲ್ಲಿ ವ್ಯಕ್ತಿಯೊಬ್ಬ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ್ದಾನೆ. 35 ವರ್ಷದ ರೆಹಮತ್ ಉಲ್ಲಾ ಬೇಗ್ ಕತ್ತು ಕೊಯ್ದುಕೊಂಡು ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗಿದೆ.
ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೇತಮಂಗಲ ನಿವಾಸಿಯಾಗಿರುವ ರೆಹಮತ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರಿಂದ ಎನ್ನಲಾಗಿದೆ. ಕತ್ತು ಕೊಯ್ದುಕೊಂಡಿದ್ದ ರೆಹಮತ್ ಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.