HomeKarnatakaಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಡಿದವರ ಮನೆಗಳ ಮೇಲೆ ಬುಲ್ಡೋಜರ್ ಓಡಿಸುತ್ತೇವೆ : ಶಾಸಕ ಯತ್ನಾಳ್...

ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಡಿದವರ ಮನೆಗಳ ಮೇಲೆ ಬುಲ್ಡೋಜರ್ ಓಡಿಸುತ್ತೇವೆ : ಶಾಸಕ ಯತ್ನಾಳ್ ಹೇಳಿಕೆ

ಯಾದಗಿರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ್ರೆ ಕಲ್ಲು ತೂರಾಟ ಮಾಡುವವರ ಮನೆ ಮೇಲೆ ಬುಲ್ಡೋಜರ್ ಓಡಿಸುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸಿದ್ದರಾಮಯ್ಯ ಸರ್ಕಾರ ಬಹಳ ದಿನ ಇರಲ್ಲ, ಮುಂದೆ ಬಿಜೆಪಿ ಸರ್ಕಾರ ಬಂದೇ ಬರುತ್ತದೆ, ಆಗ ಗಣಪತಿ ವಿಸರ್ಜನೆ ಸಮಯದಲ್ಲಿ ಕಲ್ಲು ತೂರಾಟ ಏನಾದರೂ ನಡೆಸಿದರೆ ಅವರ ಮನೆಗಳ ಮೇಲೆ ಬುಲ್ಡೋಜರ್ ಓಡಿಸುತ್ತೇವೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ ನಗರದಲ್ಲಿ ಹಿಂದೆ ಬಜರಂಗ ದಳ ಕಾರ್ಯಕರ್ತ ಹರ್ಷನ ಕೊಲೆಯಾದಾಗ ನಾಲ್ಕು ಜರನ್ನು ಎನ್ ಕೌಂಟರ್ ಮಾಡಿ ಅಂತ ಆಗ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವರಾಗಿದ್ದ ಆರಗ ಜ್ಞಾನೇಂದ್ರ ಅವರಿಗೆ ಹೇಳಿದ್ದೆ, ಆದರೆ ಅವರು ತನ್ನ ಮಾತನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular