ಶಿವಮೊಗ್ಗ : ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ನಾಳೆ ( ಅ.5) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ.
ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.05 ರಂದು ಬೆಳಗ್ಗೆ 11.00 ರಿಂದ ಮಧ್ಯಾಹ್ನ 2.00 ರವರೆಗೆ ಬೆಳಗೂರು ಕಾಂಪ್ಲೇಕ್ಸ್, ದುರ್ಗಿಗುಡಿ 1 ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್. ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.