alex Certify SCHOLARSHIP : ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SCHOLARSHIP : ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2023-24) ಸಾಲಿನಲ್ಲಿ ಮಡಿಕೇರಿ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸ: https://ssp.postmatric.karnataka.gov.in ರಲ್ಲಿ ಅರ್ಜಿ ಸಲ್ಲಿಸಬಹುದು.ಅರ್ಜಿಯೊಂದಿಗೆ ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ (ಆದಾಯ ಮಿತಿ 2.50 ಲಕ್ಷ), ವಿದ್ಯಾರ್ಥಿಯ ಆಧಾರ್ ಕಾರ್ಡ್ (ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು) ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು.

ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ). ವಿದ್ಯಾರ್ಥಿಯ ಹಿಂದಿನ ವರ್ಷದ ಮಾರ್ಕ್ ಕಾರ್ಡ್ ಪ್ರತಿ. ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ. ಅಧ್ಯಯನ/ ಬೋನಾಪೈಡ್ ಪ್ರಮಾಣ ಪತ್ರ ಪ್ರಸಕ್ತ ಕೋರ್ಸಿನ ಶುಲ್ಕ ರಶೀದಿ ಪ್ರತಿ ಹಾಗೂ ತಂದೆ/ ತಾಯಿ/ ಪೋಷಕರ ಆಧಾರ್ ಕಾರ್ಡ್ ಪ್ರತಿ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ದೂ.ಸಂ 9880232773 ಅಥವಾ ಕಚೇರಿಗೆ ನೇರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...