ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ ಬೆನ್ನಲ್ಲೇ ರೈತರ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.
ಮುಂದುವರೆದು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಳೆ ಬೃಹತ್ ಪ್ರತಿಭಟನೆ , ರ್ಯಾಲಿ ನಡೆಯಲಿದೆ. ನಾಳೆ ಗುರುವಾರ, ಬೆಂಗಳೂರಿಂದ ರ್ಯಾಲಿ ನಡೆಸಲು ಸಜ್ಜಾಗಿರೋ ವಾಟಾಳ್ ಹಾಗೂ ಕನ್ನಡಪರ ಸಂಘಟನೆಗಳು, ಕೆ ಆರ್ ಎಸ್ ಗೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ಕರ್ನಾಟಕ ಬಂದ್ ಮೂಲಕ ಹೋರಾಟ ನಡೆಸಿದ್ದ ಹೋರಾಟಗಾರರು ಇದೀಗ ಮತ್ತೆ ಕಾವೇರಿಗಾಗಿ ರಣಕಹಳೆ ಮೊಳಗಿಸಲು ಸಜ್ಜಾಗಿ ನಿಂತಿದ್ದಾರೆ. ತಮಿಳುನಾಡಿಗೆ ನೀರು ಬಿಡದಂತೆ ಕೋರಿ ಸರ್ಕಾರ ಈಗಾಗಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಪರಿಶೀಲನಾ ಅರ್ಜಿ ಸಲ್ಲಿಸಿದೆ .