HomeKarnatakaBIG NEWS: ‘ಕರ್ನಾಟಕ’ ನಾಮಕರಣವಾಗಿ 50 ವರ್ಷ ಹಿನ್ನಲೆ ವರ್ಷವಿಡೀ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’...

BIG NEWS: ‘ಕರ್ನಾಟಕ’ ನಾಮಕರಣವಾಗಿ 50 ವರ್ಷ ಹಿನ್ನಲೆ ವರ್ಷವಿಡೀ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಸಂಭ್ರಮಾಚರಣೆ

ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷವಾದ ಹಿನ್ನಲೆಯಲ್ಲಿ ವರ್ಷವಿಡೀ ಸಂಭ್ರಮಾಚರಣೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ.

‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎನ್ನುವ ಹೆಸರಲ್ಲಿ ಸಂಭ್ರಮಾಚರಣೆ ನಡೆಸಲಾಗುವುದು. 2023ರ ನವೆಂಬರ್ 1ರಿಂದ 2024ರ ನವೆಂಬರ್ 1ರವರೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ದೇಶಿ ಕ್ರೀಡೆ, ಕಲೆ, ಕನ್ನಡ ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳ ಆಯೋಜನೆಗೆ ಸೂಚನೆ ನೀಡಲಾಗಿದೆ. ಯುವ ಪೀಳಿಗೆಗೆ ಕನ್ನಡ ನಾಡು, ಸಂಸ್ಕೃತಿ, ಪ್ರಾದೇಶಿಕತೆಯ ಭವ್ಯತೆ ತಿಳಿಸಲು ಅರ್ಥಪೂರ್ಣ ಮತ್ತು ಸಂಭ್ರಮದ ಕಾರ್ಯಕ್ರಮಗಳನ್ನು ಆಯೋಜಿಸಲು ಸಿಎಂ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular