ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ಅ.15ವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು , ಮತ್ತೆ ಕನ್ನಡಪರ ಸಂಘಟನೆಗಳು, ರೈತರ ಕಿಚ್ಚು ಜೋರಾಗಿದೆ.
ಇಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ , ರ್ಯಾಲಿ ನಡೆಯಲಿದ್ದು, ವಾಟಾಳ್ ಹಾಗೂ ಕನ್ನಡಪರ ಸಂಘಟನೆಗಳು, ಮಂಡ್ಯದ ಕೆ ಆರ್ ಎಸ್ ಗೆ ಮುತ್ತಿಗೆ ಹಾಕಲು ಸಜ್ಜಾಗಿದೆ. ಬೆಂಗಳೂರು ಬಂದ್, ಕರ್ನಾಟಕ ಬಂದ್ ಮೂಲಕ ಹೋರಾಟ ನಡೆಸಿದ್ದ ಹೋರಾಟಗಾರರು ಇದೀಗ ಮತ್ತೆ ಕಾವೇರಿಗಾಗಿ ರಣಕಹಳೆ ಮೊಳಗಿಸಲು ಸಜ್ಜಾಗಿದ್ದು, ವಾಟಾಳ್ ಹಾಗೂ ಕನ್ನಡಪರ ಸಂಘಟನೆಗಳು, ಕೆ ಆರ್ ಎಸ್ ಗೆ ಮುತ್ತಿಗೆ ಹಾಕಲು ಸಜ್ಜಾಗಿದೆ.
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ರಾಜ್ಯದ ವಿವಿಧ ಕಡೆ ರೈತರು, ಕನ್ನಡ ಪರ ಸಂಘಟನೆ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ ನೀಡಲಾಗಿದೆ.