alex Certify BREAKING : ‘ಸಾಲು ಮರದ ತಿಮ್ಮಕ್ಕ’ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ : ದತ್ತುಪುತ್ರ ಉಮೇಶ್ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಸಾಲು ಮರದ ತಿಮ್ಮಕ್ಕ’ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ : ದತ್ತುಪುತ್ರ ಉಮೇಶ್ ಮನವಿ

ಬೆಂಗಳೂರು : ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಏರುಪೇರಾಗಿದ್ದು,  ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಲು ಮರದ ತಿಮ್ಮಕ್ಕ ಬದುಕಿರುವಾಗಲೇ   ತಿಮ್ಮಕ್ಕ ವಿಧಿವಶರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.  ಭಾವನಾತ್ಮಕ ಸಂದೇಶ ಬರೆದುಕೊಂಡು ಮತ್ತೆ ಹುಟ್ಟಿಬನ್ನಿ ಎಂದು ಕೆಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಆದರೆ, ಸಾಲು ಮರದ ತಿಮ್ಮಕ್ಕ ಬದುಕಿರುವಾಗಲೇ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಶ್ರದ್ಧಾಂಜಲಿ ಪೋಸ್ಟ್ ಹಾಕಿಕೊಂಡಿದ್ದಾರೆ. ಈ ಬಗ್ಗೆ ಅವರ ದತ್ತುಪುತ್ರ ಉಮೇಶ್ ಸ್ಪಷ್ಟನೆ ನೀಡಿದ್ದಾರೆ. ತಿಮ್ಮಕ್ಕಳ ದತ್ತುಪುತ್ರ ಉಮೇಶ್ ಯಾರೊಬ್ಬರೂ ಸುಳ್ಳು ಸುದ್ದಿ ಹರಡದಂತೆ  ಮನವಿ ಮಾಡಿದ್ದಾರೆ.

ಸಾಲು ಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೆ, ಕೆಲವರು ಸಾಲು ಮರದ ತಿಮ್ಮಕ್ಕ ಅವರು ಬದುಕಿರುವಾಗಲೇ ಸತ್ಯಾಂಶ ತಿಳಿದುಕೊಳ್ಳದೇ ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದಯವಿಟ್ಟು ಸುಳ್ಳು ಸುದ್ದಿ ಹರಡಬೇಡಿ ಎಂದು ದತ್ತುಪುತ್ರ ಉಮೇಶ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಲು ಮರದ ತಿಮ್ಮಕ್ಕಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಾಲುಮರದ ತಿಮ್ಮಕ್ಕ , ಕರ್ನಾಟಕ ರಾಜ್ಯದ ಒಬ್ಬ ಭಾರತೀಯ ಪರಿಸರವಾದಿಯಾಗಿದ್ದು , ಹುಲಿಕಲ್ ಮತ್ತು ಕುದೂರಿನ ನಡುವಿನ ಹೆದ್ದಾರಿಯ 45-ಕಿಲೋಮೀಟರ್ (28 ಮೈಲಿ) ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಪೋಷಿಸುವ ಕೆಲಸಕ್ಕಾಗಿ ಹೆಸರುವಾಸಿಯಾಗಿದ್ದಾರೆ . ಅವರು ಸುಮಾರು 8000 ಇತರ ಮರಗಳನ್ನು ನೆಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...