ಚಿಕ್ಕಮಗಳೂರು: ಸಾಲಬಾಧೆಗೆ ಬೇಸತ್ತ ರೈತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿಯ ಗ್ರಾಮದಲ್ಲಿ ನಡೆದಿದೆ.
ಹನುಮಮ್ಮ (75) ಮೃತ ಮಹಿಳೆ. 3 ಎಕರೆ 30 ಗುಂಟೆಯ ಹೊಲದಲ್ಲಿ ಜೋಳ, ರಾಗಿ ಬಿತ್ತನೆ ಮಾಡಿದ್ದರು. ಆದರೆ ಈವರ್ಷ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬಿತ್ತಿದ ಬೆಳೆ ನಾಶವಾಗಿದೆ.
ಉತ್ತಮ ಬೆಳೆ ಬರುವ ನಿರೀಕ್ಷೆಯಲ್ಲಿದ್ದ ಮಹಿಳೆಗೆ ಮಳೆ ಕೊರತೆಯಿಂದ ಬೆಳೆ ನಷ್ಟವಾಗಿದೆ. ಇನ್ನೊಂದೆಡೆ ಸಾಲ ತೀರಿಸುವ ದಾರಿ ಕಾಣದಾಗಿದೆ. ಇದರಿಂದ ತೀವ್ರವಾಗಿ ಮನನೊಂದ ಮಹಿಳೆ ದುಡುಕಿನ ನಿರ್ಧರ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.