HomeKarnatakaBIG NEWS: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವೆಂಬ ಶಾಮನೂರು ಹೇಳಿಕೆ ಮುಗಿದ ಅಧ್ಯಾಯ: HK ಪಾಟೀಲ್

BIG NEWS: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವೆಂಬ ಶಾಮನೂರು ಹೇಳಿಕೆ ಮುಗಿದ ಅಧ್ಯಾಯ: HK ಪಾಟೀಲ್

ಬೆಂಗಳೂರು: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಹೆಚ್.ಕೆ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಹೆಚ್.ಕೆ. ಪಾಟೀಲ್, ಮಾಹಿತಿ ಕೊರತೆಯಿಂದ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಈಗಾಗಲೇ ಮಾಹಿತಿ ನೀಡುವ ಕೆಲಸವನ್ನು ಕೆಲವು ಶಾಸಕರೇ ಮಾಡಿದ್ದಾರೆ. ಸರಿಯಾದ ಮಾಹಿತಿ ಈಗಾಗಲೇ ಪಬ್ಲಿಕ್ ಡೊಮೇನ್ ಗೆ ಬಂದಿದೆ. ಹೀಗಾಗಿ ಶಾಮನೂರು ಅವರಿಗೂ ತಪ್ಪು ಮಾಹಿತಿ ಏನಿತ್ತು ಎಂಬುದು ಗೊತ್ತಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲವು ಶಾಸಕರು ನೀಡಿರುವ ಮಾಹಿತಿ ಇದಾಗಿದೆ. ಇದು ಸರ್ಕಾರ ಬಿಡುಗಡೆ ಮಾಡಿದ್ದಲ್ಲ. ಯಾರೋ ಕೆಲವು ಅಧಿಕಾರಿಗಳು ಶಾಮನೂರು ಅವರಿಗೆ ತಪ್ಪು ಮಾಹಿತಿ ನೀಡಿದ್ದರು. ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ಮುಗಿದ ಅಧ್ಯಾಯ ಎಂದು ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular