ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಎರಡೂ ಪಕ್ಷಗಳ ಹಲವು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಹಾಲಿ ಶಾಸಕರೇ ಮೈತ್ರಿ ವಿರುದ್ಧ ತಿರುಗಿಬಿದ್ದಿದ್ದಾರೆ.
ಮೈತ್ರಿ ಬೆನ್ನಲ್ಲೇ ಜೆಡಿಎಸ್ ಅಲ್ಪಸಂಖ್ಯಾತ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಈ ನಡುವೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ದಳಪತಿಗಳ ಕೈಗೂ ಸಿಗದೇ, ಸಭೆ ಕರೆದರೆ ಸಭೆಗೂ ಹಾಜರಾಗದೇ ಪಕ್ಷದ ವಿರುದ್ಧವೇ ಸೆಡ್ಡು ಹೊಡೆದಿದ್ದಾರೆ. ಎರಡು ದಿನಗಳ ಹಿಂದೆ ಜೆಡಿಎಸ್ ಅಸಮಾಧಾನಿತರ ಸಭೆಗೂ ಗೈರಾಗಿದ್ದ ಇಬ್ರಾಹಿಂಗೆ ಸ್ವತಃ ದೇವೇಗೌಡರೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಆದರೂ ಸಿ.ಎಂ. ಇಬ್ರಾಹಿಂ ಮನವೊಲಿಕೆ ಸಾಧ್ಯವಾಗಿಲ್ಲ ಎನ್ನಲಾಗಿದೆ.
ದಳಪತಿಗಳ ಯಾವುದೇ ಕಸರತ್ತಿಗೂ ಸಿ.ಎಂ.ಇಬ್ರಾಹಿಂ ಜಗ್ಗುತ್ತಿಲ್ಲ. ಇದೀಗ ಮತ್ತೊಮ್ಮೆ ದೇವೇಗೌಡರು ಸಿ.ಎಂ.ಇಬ್ರಾಹಿಂ ಮನವೊಲಿಕೆಗೆ ಯತ್ನ ನಡೆಸಿದ್ದು, ಮತ್ತೆ ದೂರಾವಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಹೇಳಿದ್ದಾರೆ ಎನ್ನಲಾಗಿದೆ.