ಬೆಂಗಳೂರು : ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ, ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ಚಿಲ್ಲರೆ ಮದ್ಯ ಮಾರಾಟ ಮಳಿಗೆಗಳಿಗೆ ಪರವಾನಗಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿತ್ತು.
ಈ ಹಿನ್ನೆಲೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು, ಇದೀಗ ಈ ಕುರಿತು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ನಿರ್ಧಾರದಿಂದ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿದಿದೆ, ನಮ್ಮ ಸರ್ಕಾರ ಮದ್ಯದ ಅಂಗಡಿ ತೆಗೆಯಲ್ಲ ಎಂದರು.
ಬಿಜೆಪಿ ಆಡಳಿತದಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ. ನಮ್ಮ ಅವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಗ್ಯಾರಂಟಿ ಯೋಜನೆಗೆ ಹಣದ ಕೊರತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳ ಹಿಂದೆ ಸಚಿವರೊಬ್ಬರು ಗ್ರಾಮ ಪಂಚಾಯಿತಿಗಳಲ್ಲಿ ಮಧ್ಯದ ಅಂಗಡಿ ತೆರೆಯುವುದಾಗಿ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಮೂರು ಸಾವಿರ ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೊಸ ಮದ್ಯ ಮಾರಾಟ ಮಳಿಗೆ ತೆರೆಯಲಾಗುವುದು. ಸೂಪರ್ ಮಾರ್ಕೆಟ್ ಗಳಲ್ಲೂ ಮದ್ಯ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿತ್ತು.