alex Certify BREAKING : 2023-24 ನೇ ಸಾಲಿನ ‘SSLC’ ಮುಖ್ಯ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ |Karnataka SSLC Exam | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 2023-24 ನೇ ಸಾಲಿನ ‘SSLC’ ಮುಖ್ಯ ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ |Karnataka SSLC Exam

ಬೆಂಗಳೂರು : 2024ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಾಗೆಯೇ ಖಾಸಗಿ ಅಭ್ಯರ್ಥಿಗಳು ಮತ್ತು ಮನರಾವರ್ತಿತ ಅಭ್ಯರ್ಥಿಗಳು ಸಹ ಈ ಪರೀಕ್ಷೆಗೆ ನೋಂದಾಯಿಸಲು ಅರ್ಜಿಗಳನ್ನು ಶಾಲೆಗಳ ಮುಖಾಂತರ ಸಲ್ಲಿಸಬಹುದಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF), ಖಾಸಗಿ ಅಭ್ಯರ್ಥಿಗಳ (CCEPF) ಮತ್ತು ಪುನರಾವರ್ತಿತ ಅಭ್ಯರ್ಥಿಗಳ (CCERR, CCEPR, NSR & NSPR) ವಿವರಗಳನ್ನು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್ಲೋಡ್ ಮಾಡಲು ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಲಾಗಿದೆ.

ವಿದ್ಯಾರ್ಥಿಗಳ ನೋಂದಣಿಗೆ ಅಗತ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿಕೊಂಡು ಮಂಡಳಿ ತಿಳಿಸುವ ದಿನಾಂಕದಲ್ಲಿ ಶಾಲಾ ಲಾಗಿನ್ನಲ್ಲಿ ವಿದ್ಯಾರ್ಥಿಗಳ ನೋಂದಣಿಯನ್ನು ಮಾಡುವುದು.
ನಿರಂತರ ಹಾಗೂ ಸಮಗ್ರ ಮೌಲ್ಯಮಾಪನ (ಸಿ.ಸಿ.ಇ) ಪದ್ಧತಿಯನ್ನು ರಾಜ್ಯದ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೂ ಮುಂದುವರೆಸಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ಮಾನದಂಡಗಳು

* ಹತ್ತು ವರ್ಷದ ಔಪಚಾರಿಕ ಶಿಕ್ಷಣವನ್ನು ಮುಗಿಸಿದ ಎಲ್ಲಾ ಶಾಲಾ ವಿದ್ಯಾರ್ಥಿಗಳು, ಹತ್ತನೇ ವರ್ಷದಅಂತ್ಯದಲ್ಲಿ ಎಸ್.ಎಸ್.ಎಲ್.ಸಿ. ಅಂತಿಮ ಪರೀಕ್ಷೆ ಬರೆಯತಕ್ಕದ್ದು, ಪರೀಕ್ಷೆಯು ವಿದ್ಯಾರ್ಥಿಯ ಆಂತರಿಕ ಮೌಲ್ಯಮಾಪನ ಹಾಗೂ ಬಾಹ್ಯ ಪರೀಕ್ಷಾ ವಿಧಾನದಿಂದ ಕೂಡಿರಬೇಕು.

* ಬಾಹ್ಯ ಪರೀಕ್ಷೆಗೆ ಶೇ.80 ಹಾಗೂ ಆಂತರಿಕ ಮೌಲ್ಯಮಾಪನಕ್ಕೆ ಶೇ.20 ಅಂಕಗಳನ್ನು ಮೀಸಲಿಡತಕ್ಕದ್ದು. ವಿದ್ಯಾರ್ಥಿಗಳ ಪ್ರಗತಿಯನ್ನು ಭಾಗ-ಎ (ಪಠ್ಯ ವಿಷಯಗಳು), ಭಾಗ-ಬಿ (ಸಹಪಠ್ಯ ವಿಷಯಗಳು) ಆಧಾರದಮೇಲೆ ಪರಿಗಣಿಸಬೇಕಾಗುತ್ತದೆ.

* ಭಾಗ-ಎ ಯಲ್ಲಿ ಬರುವ ಪ್ರತಿ ವಿಷಯಗಳಿಗೆ ಅಂಕಗಳು ಹಾಗೂ ಶ್ರೇಣಿಗಳನ್ನು ಒಟ್ಟಾರೆ ಅಂಕಗಳು ಮತ್ತು ಶ್ರೇಣಿಯನ್ನು (Cumulative Grade Average) CGA ಆಧರಿಸಿ ನೀಡಲಾಗುತ್ತದೆ. ಎಲ್ಲಾ ವಿಷಯಗಳಲ್ಲಿ ಬಾಹ್ಯ ಪರೀಕ್ಷೆಗೆ ಒಟ್ಟು 500 ಅಂಕಗಳು ಮತ್ತು ಆಂತರಿಕ ಮೌಲ್ಯಮಾಪನಕ್ಕೆ 125 ಅಂಕಗಳನ್ನು ನಿಗದಿಪಡಿಸಿದೆ.

 

 

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...