HomeKarnatakaಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಉಪ್ಪಾರ ಸಮುದಾಯಕ್ಕೆ ಗುಡ್ ನ್ಯೂಸ್ : ಸಹಾಯಧನ, ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಗಂಗಾ ಕಲ್ಯಾಣ ನೀರಾವರಿ ಯೋಜನೆ (ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು), ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಗಳಿಗೆ ಸಹಾಯಧನ/ಸಾಲ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೆÇೀರ್ಟಲ್ನಡಿ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://upparadevelopment.karnataka.gov.in ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ: 080-22252555 ನ್ನು ಹಾಗೂ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ/ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ, ಭಾಗ್ಯ ನಿಲಯ, ಭಂಡಾರಿ ಏಜೆನ್ಸಿ ಹತ್ತಿರ, ಗಾಂಧಿನಗರ, ಶಿವಮೊಗ್ಗ ಇಲ್ಲಿ ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular