ರಾಮನಗರ: ಪಂಚಾಯ್ತಿಗೊಂದು ಮದ್ಯದಂಗಡಿ ತೆರೆಯುವ ವಿಚಾರ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ನಡುವೆ ಸರ್ಕಾರದಲ್ಲಿಯೇ ಈ ಬಗ್ಗೆ ಗೊಂದಲಗಳು ಆರಂಭವಾಗಿದೆ.
ಮದ್ಯದಂಗಡಿ ತೆರೆಯುವ ಬಗ್ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅತ್ತ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಮದ್ಯದಂಗಡಿ ತೆರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಇತ್ತ ರಾಮನಗರದಲ್ಲಿ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಕ್ತ ಪ್ರದೇಶದಲ್ಲಿ ಬಾರ್ ಅಂಗಡಿಗೆ ಲೈಸನ್ಸ್ ಕೊಡುವುದಾಗಿ ಹೇಳಿದ್ದಾರೆ.
ಕಳೆದ 30 ವರ್ಷಗಳಿಂದ ಯಾವುದೇ ಅಬಕಾರಿ ಲೈಸನ್ಸ್ ನೀಡಿಲ್ಲ. ಹಳ್ಳಿಗಳಲ್ಲಿ ಬಾರ್ ತೆರೆಯಲು ಅವಕಾಶ ಕೊಡಲ್ಲ. ಈ ಬಗ್ಗೆ ಚರ್ಚಿಸಿ ಸೂಕ್ತ ಪ್ರದೇಶಗಳಲ್ಲಿ ಬಾರ್ ತೆಗೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೇ ಕುಡಿತದ ಅಭ್ಯಾಸವಿದ್ದರೆ ಕುಡಿತವನ್ನು ಯಾರಿಂದಲು ತಪ್ಪಿಸಲು ಸಾಧ್ಯವಾಗಲ್ಲ ಎಂದು ಹೇಳಿದ್ದಾರೆ