HomeKarnatakaಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ

ಕೊಪ್ಪಳ: ಪಡಿತರ ಕಾರ್ಡುಗಳ ತಿದ್ದುಪಡಿಗೆ ಆಹಾರ ತಂತ್ರಾಂಶದಲ್ಲಿ ಅಕ್ಟೋಬರ್ 11ರಿಂದ ಅ. 13ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಕಾರ್ಡುದಾರರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಈ ಅವಧಿಯಲ್ಲಿ (ಅ.11ರಿಂದ ಅ.13ರವರೆಗೆ) ಪಡಿತರ ಕಾರ್ಡುಗಳ ತಿದ್ದುಪಡಿ ಮಾಡಿಕೊಳ್ಳಲಾದ ಮನವಿಯನ್ನು ಆಹಾರ ನಿರೀಕ್ಷಕರ ಲಾಗಿನ್‌ನಲ್ಲಿ ಅನುಮೊದನೆಗೆ ಸಲ್ಲಿಸಲು ಅಕ್ಟೋಬರ್ 20ರ ಸಂಜೆ 7 ಗಂಟೆಯವರೆಗೆ ಅವಕಾಶವಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಬಿಟಿ ಯೋಜನೆಗೆ ಸಂಬಂಧಿಸಿದಂತೆ, ಪಡಿತರ ಚೀಟಿಗಳ ಎನ್.ಪಿ.ಸಿ.ಐ ಬ್ಯಾಂಕ್ ವೆರೆಫಿಕೇಶನ್ ಮತ್ತು ಆಧಾರ್ ಅಥೆಂಟಿಕೇಶನ್ ಫೇಲ್ಡ್ ಪ್ರಕರಣಗಳ ಕುಟುಂಬದ ಮುಖ್ಯಸ್ಥರು ಸಂಬಂಧಿಸಿದ ಬ್ಯಾಂಕುಗಳಿಗೆ ಭೇಟಿ ನೀಡಿ ಬ್ಯಾಂಕ್ ಖಾತೆಗಳನ್ನು ಸರಿಪಡಿಸಿಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular