HomeKarnatakaಕಾರ್ಮಿಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ ಮರು ನಿಗದಿಗೆ ಹೈಕೋರ್ಟ್ ಆದೇಶ

ಕಾರ್ಮಿಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ ಮರು ನಿಗದಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಕನಿಷ್ಠ ವೇತನ ಕುರಿತಂತೆ ರಾಜ್ಯ ಸರ್ಕಾರದ ಈ ಹಿಂದಿನ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದ್ದು, ಹೊಸದಾಗಿ ಕನಿಷ್ಠ ವೇತನ ಮರು ನಿಗದಿ ಮಾಡುವಂತೆ ಸೂಚನೆ ನೀಡಿದೆ.

2022 ರಲ್ಲಿ ರಾಜ್ಯ ಸರ್ಕಾರ ಕನಿಷ್ಠ ವೇತನ ನಿಗದಿಪಡಿಸಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಸುಪ್ರೀಂಕೋರ್ಟ್ 1992ರಲ್ಲಿ ರೋಪ್ಟಾ ಕೋಸ್ ಪ್ರಕರಣದಲ್ಲಿ ತಿಳಿಸಿದ ಮಾರ್ಗಸೂಚಿಗಳ ಅನ್ವಯ ಮರು ಲೆಕ್ಕಾಚಾರ ಮಾಡಿ ಹೊಸದಾಗಿ ಕನಿಷ್ಠ ವೇತನ ನಿಗದಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರಿಂದಾಗಿ ಅಸಂಘಟಿತ ವಲಯದ ಸುಮಾರು 1.7 ಕೋಟಿ ಕಾರ್ಮಿಕರ ವೇತನ ಹೆಚ್ಚಳವಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ 2022ರ ಜೂನ್ 25 ರಂದು ಹೊರಡಿಸಿದ್ದ ಅಧಿಸೂಚನೆ ರದ್ದುಪಡಿಸಲು ಕೋರಿ ಇಂಡಿಯನ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಮತ್ತು ಇಂಜಿನಿಯರಿಂಗ್ ಅಂಡ್ ಜನರಲ್ ವರ್ಕರ್ಸ್ ಯೂನಿಯನ್ ಅರ್ಜಿ ಸಲ್ಲಿಸಿದ್ದವು. ಹೈಕೋರ್ಟ್ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿ ಈ ಸೂಚನೆ ನೀಡಿದೆ. ಮುಂದಿನ ಎರಡು ತಿಂಗಳಲ್ಲಿ ವೇತನ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡಲಾಗಿದೆ.

ರಾಜ್ಯ ಸರ್ಕಾರ 2022ರಲ್ಲಿ ಸುಮಾರು 34 ವಲಯಗಳ ಅಸಂಘಟಿತ ಕಾರ್ಮಿಕರಿಗೆ ಶೇಕಡ 5 ರಿಂದ 10 ರಷ್ಟು ವೇತನ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ಹೊರಡಿಸುವ ಮೊದಲು ಸುಪ್ರೀಂ ಕೋರ್ಟ್ ನ ನಿಯಮಗಳನ್ನು ಅನುಸರಿಸಿಲ್ಲ, ಕಾರ್ಮಿಕ ಇಲಾಖೆಗಳ ಸಲಹೆ ಪರಿಗಣಿಸಿಲ್ಲ. ಹಾಗಾಗಿ ಅಧಿಸೂಚನೆ ರದ್ದುಪಡಿಸಬೇಕು. ಸುಪ್ರೀಂಕೋರ್ಟ್ ರೋಪ್ಟಾ ಕೋಸ್ ಪ್ರಕರಣದಲ್ಲಿ ನೀಡಿದ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಿ ಕನಿಷ್ಠ ವೇತನ ನಿಗದಿಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸರ್ಕಾರದ ಅಧಿಸೂಚನೆ ರದ್ದುಪಡಿಸಿ ಕನಿಷ್ಠ ವೇತನ ಮರು ನಿಗದಿಗೆ ಆದೇಶ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular